Job Description: * ಪ್ರಸ್ತುತ ಕರ್ನಾಟಕ ಮತ್ತು ಉತ್ತರ ಪ್ರದೇಶಗಳಲ್ಲಿ ತಲಾ ಒಂದರಂತೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಇತ್ತೀಚಿಗೆ ತಾತ್ವಿಕ ಒಪ್ಪಿಗೆ ನೀಡಿದೆ. * ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಲೋಕಸಭೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ಸಂಬಂಧ ಲಿಖಿತ ಉತ್ತರವನ್ನು ನೀಡಿದರು. * ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕಾಗಿ ಕರ್ನಾಟಕ, ಗುಜರಾತ್, ಆಂಧ್ರಪ್ರದೇಶ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಗೋವಾ ಸರ್ಕಾರಗಳಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. * ಪ್ರಸ್ತುತ ಕರ್ನಾಟಕದ ಮಂಗಳೂರು ಬಳಿಯ ಗಂಜಿಮಠ ಮತ್ತು ಉತ್ತರ ಪ್ರದೇಶದ ಗೋರಖ್ಪುರ ಬಳಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಮಾಡಲು, ಈ ಎರಡು ರಾಜ್ಯ ಸರ್ಕಾರಗಳ ಪ್ರಸ್ತಾವನೆಗೆ ಕೇಂದ್ರ ಸರ್ಕಾರವು ಅನುಮತಿಯನ್ನು ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.