Job Description: * ರಾಜ್ಯ ಚುನಾವಣಾ ಆಯುಕ್ತರಾಗಲು ಅವರು ಸ್ವತಂತ್ರ ವ್ಯಕ್ತಿ ಆಗಿರಬೇಕು ಎಂದು ಸುಪ್ರೀಂಕೋರ್ಟ್ ಇತ್ತೀಚಿಗೆ ತಿಳಿಸಿದೆ. * ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗದಲ್ಲಿರುವ ವ್ಯಕ್ತಿ ಅಥವಾ ಸರ್ಕಾರಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ರಾಜ್ಯ ಚುನಾವಣಾ ಆಯುಕ್ತರಾಗಲು ಅವಕಾಶವಿಲ್ಲ. * ಗೋವಾ ಸರ್ಕಾರವು ತನ್ನ ಕಾನೂನು ಕಾರ್ಯದರ್ಶಿಗೆ ರಾಜ್ಯ ಚುನಾವಣಾ ಆಯುಕ್ತರ ಹೆಚ್ಚುವರಿ ಉಸ್ತುವಾರಿಯನ್ನು ನೀಡಿದ ಕಾರಣ ನ್ಯಾಯಾಲಯ ವಿಚಾರಣೆ ಸಮಯದಲ್ಲಿ ಪ್ರಮುಖವಾಗಿ ಪರಿಗಣಿಸಿ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. * ಗೋವಾ ರಾಜ್ಯ ಚುನಾವಣಾ ಆಯೋಗಕ್ಕೆ 10 ದಿನಗಳಲ್ಲಿ ಪಂಚಾಯತ್ ಚುನಾವಣೆಯ ಅಧಿಸೂಚನೆ ಹೊರಡಿಸಿ ಮತ್ತು ಏಪ್ರಿಲ್ 30 ರೊಳಗೆ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ನ್ಯಾಯಮೂರ್ತಿಯಾಗಿರುವ ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠವು ನಿರ್ದೇಶನ ನೀಡಿದೆ. * ನ್ಯಾಯಪೀಠ ಆದೇಶದ ಮೇರೆಗೆ ರಾಜ್ಯ ಚುನಾವಣಾ ಆಯೋಗದ ಕಾರ್ಯಗಳಲ್ಲಿ ರಾಜ್ಯ ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಪೀಠವು ತಿಳಿಸಿದೆ.