Job Description: * ರಾಜ್ಯ ವಕ್ಫ್ ಬೋರ್ಡ್ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸದಂತೆ ಸುತ್ತೋಲೆ ಹೊರಡಿಸಿದೆ. * ಪ್ರಸ್ತುತ ಮಸೀದಿ, ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಸದಂತೆ ರಾಜ್ಯ ವಕ್ಫ್ ಬೋರ್ಡ್ ಮಂಡಳಿ ಸುತ್ತೋಲೆ ಹೊರಡಿಸಿದೆ. * ವಕ್ಫ್ ಬೋರ್ಡ್ ಮಂಡಳಿಯ ಅಡಿಯಲ್ಲಿ ಸರಿ ಸುಮಾರು 32 ಸಾವಿರ ಮಸೀದಿಗಳು ಹಾಗೂ ದರ್ಗಾ ನೋಂದಣಿಯಾಗಿವೆ. * ರಾಜ್ಯ ವಕ್ಫ್ ಬೋರ್ಡ್ ಮಂಡಳಿಯು ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಭೆ ನಡೆಸಲಾಗಿತ್ತು. * ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ರಾಜ್ಯ ವಕ್ಫ್ ಬೋರ್ಡ್ ಮಂಡಳಿ ತಿಳಿಸಿದೆ. * ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸುವಂತಿಲ್ಲ, ಇನ್ನುಳಿದ ಸಮಯದಲ್ಲಿ ಶಬ್ದಮಾಲಿನ್ಯ ನಿಯಂತ್ರಣ ಮಾರ್ಗಸೂಚಿಯನ್ನು ಗಮನಿಸಿ ಬಳಸಬೇಕು ಎಂದು ಸುತ್ತೋಲೆ ಹೊರಡಿಸಿದೆ. * ರಾಜ್ಯ ವಕ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮದ್ ಯೂಸುಫ್ ಸುತ್ತೋಲೆಯಲ್ಲಿ ಮಸೀದಿಗಳಲ್ಲಿ ಅಝಾನ್ ಹೇಳಲು, ಮರಣವಾರ್ತೆ, ದಫನ್ ಕಾರ್ಯದ ಸಮಯ ಮತ್ತು ಪ್ರಮುಖ ಉದ್ದೇಶಗಳಿಗೆ ಧ್ವನಿವರ್ಧಕ ಬಳಸಬಹುದು ಎಂದು ತಿಳಿಸಿದ್ದಾರೆ.