Job Description: * ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಸಲಹೆಗಾರಾಗಿರುವ ಪ್ರದೀಪ್ ಕುಮಾರ್ ಸಿನ್ಹಾ ಅವರು ತಮ್ಮ ಹುದ್ದೆಗೆ ವೈಯಕ್ತಿಕ ಕಾರಣಗಳನ್ನು ತಿಳಿಸಿ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. * ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅಥವಾ ಪುದುಚೇರಿಯಂತಹ ಸಾಂವಿಧಾನಿಕ ಹುದ್ದೆಗೆ ಸಿನ್ಹಾ ಅವರನ್ನು ನರೇಂದ್ರ ಮೋದಿ ಸರ್ಕಾರವು ಪರಿಗಣಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. * ಪಿ. ಕೆ. ಸಿನ್ಹಾ ರವರು 1977 ರ ಬ್ಯಾಚ್ನ ಉತ್ತರ ಪ್ರದೇಶದ ಕೇಡರ್ ಅಧಿಕಾರಿಯಾಗಿದ್ದರು. * ಐಎಎಸ್ ಇತಿಹಾಸದಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿಯಾಗಿ ಮೂರು ವಿಸ್ತರಣೆಗಳನ್ನು ಪಡೆದ ಏಕೈಕ ವ್ಯಕ್ತಿಯಾಗಿದ್ದಾರೆ.