Job Description: * ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. * ಕರ್ನಾಟಕ ಸರ್ಕಾರವು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಸುವ ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು 1 ಕೋಟಿ ರೂ. ಸಹಾಯಧನ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. * ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೇಶ್ವರ ಈ ಸಹಾಯಧನ ಘೋಷಣೆ ಮಾಡಿದ್ದಾರೆ, ಇದೀಗ ಕರ್ನಾಟಕ ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಆದೇಶವನ್ನು ಹೊರಡಿಸಿದೆ. * ಸರ್ಕಾರವು ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳನ್ನು ಸಹಾಯಧನ ನೀಡಲು ಆದೇಶ ಹೊರಡಿಸಿದೆ. * ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳಿಗೆ 50 ಲಕ್ಷ ರೂ. ಹಾಗೂ ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳಿಗೆ 50 ಲಕ್ಷ ರೂಗಳನ್ನು ನೀಡಲಾಗುವದು ಎಂದು ತಿಳಿಸಿದೆ.