Job Description: * ಭಾರತ ಲೆಜೆಂಡ್ಸ್ ತಂಡವು ರಸ್ತೆ ಸುರಕ್ಷತಾ ವಿಶ್ವ ಸರಣಿ ಟಿ20 ಪಂದ್ಯಗಳಲ್ಲಿ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. * ಸಚಿನ್ ತೆಂಡುಲ್ಕರ್ ನಾಯಕತ್ವದ ಭಾರತ ತಂಡವು ರಸ್ತೆ ಸುರಕ್ಷತಾ ವಿಶ್ವ ಸರಣಿ ಟಿ20 ಫೈನಲ್ ಪಂದ್ಯದಲ್ಲಿ 14 ರನ್ಗಳಿಂದ ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು ಮಣಿಸಿತು. * ಶಹೀದ್ ವೀರನಾರಾಯಣ ಸಿಂಗ್ ಕ್ರೀಡಾಗಂಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. * ಈ ಲೆಜೆಂಡ್ಸ್ ಕ್ರೀಡಾಕೂಟದಲ್ಲಿ ಭಾರತದ ಲೆಜೆಂಡ್ಸ್ ತಂಡದ ಆಟಗಾರರಾದ ಯೂಸುಫ್ ಪಠಾಣ್ ಹಾಗೂ ಯುವರಾಜ್ ಸಿಂಗ್ ಉತ್ತಮ ಪ್ರದರ್ಶನವನ್ನು ತೋರಿದರು. * ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಯೂಸುಫ್ ಪಠಾಣ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಹಾಗೂ ಶ್ರೀಲಂಕಾ ಲೆಜೆಂಡ್ಸ್ ನಾಯಕ ತಿಲಕರತ್ನೆ ದಿಲ್ಶಾನ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.