Job Description: * ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಪ್ರಸ್ತುತ ದೇಶದಲ್ಲಿ 70 ಸಾವಿರ ಆಯುಷ್ಮಾನ್ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ. * ಕೇಂದ್ರ ಆರೋಗ್ಯ ಸಚಿವಾಲಯ ಆಯುಷ್ಮಾನ್ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಇಲ್ಲಿಯವರೆಗೆ ಸರಿ ಸುಮಾರು 41.35 ಕೋಟಿ ಜನ ಸೇವೆಯನ್ನು ಪಡೆದುಕೊಂಡಿದ್ದಾರೆ. * ಆಯುಷ್ಮಾನ್ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಸೇವೆಯನ್ನು ಪಡೆದುಕೊಂಡಿರವ 41.35 ಕೋಟಿ ಜನರಲ್ಲಿ ಶೇಕಡ 54ರಷ್ಟು ಮಹಿಳೆಯರು ಸೇವೆಯನ್ನು ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. * ಆಯುಷ್ಮಾನ್ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಯೋಜನೆಯನ್ನು 2018ರ ಏಪ್ರಿಲ್ ತಿಂಗಳಿನಲ್ಲಿ ಪ್ರಾರಂಭಮಾಡಲಾಗಿದೆ. * ಕೇಂದ್ರ ಆರೋಗ್ಯ ಸಚಿವಾಲಯವು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ 1.50 ಲಕ್ಷ ಉಪ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಡಿಸೆಂಬರ್ 2022ರ ವೇಳೆಗೆ ಆಯುಷ್ಮಾನ್ ಭಾರತ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಬದಲಾವಣೆ ಮಾಡಲಾಗುವದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿಯನ್ನು ನೀಡಿದೆ.