Job Description: * ದೇಶದಲ್ಲಿ 2024ರ ಲೋಕಸಭಾ ಚುನಾವಣೆ ಹೊತ್ತಿಗೆ ರಿಮೋಟ್ ವೋಟಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಭರದಿಂದ ನಡೆಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ತಿಳಿಸಿದ್ದಾರೆ. * ರಿಮೋಟ್ ವೋಟಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಐಐಟಿ ಮದ್ರಾಸ್ ಹಾಗೂ ಇತರೆ ಐಐಟಿಗಳ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಹೊಂದಿರುವ ವ್ಯಕ್ತಿಗಳನ್ನೂ ಸೇರಿಸಿಕೊಂಡು ಸಂಶೋಧನೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು. * ರಾಜಕೀಯ ಪಕ್ಷಗಳ ಜೊತೆಗೆ ರಿಮೋಟ್ ವೋಟಿಂಗ್ ಕುರಿತು ಚರ್ಚೆ ನಡೆಸಲಾಗುತ್ತದೆ ಮತ್ತು ಎಲ್ಲರ ಒಪ್ಪಿಗೆಯನ್ನು ಪಡೆದ ನಂತರವೇ ಈ ವ್ಯವಸ್ಥೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಹೇಳಿದರು.