Job Description: * ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನವನ್ನು ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆಯನ್ನು ನೀಡಿದೆ. * ಕರ್ನಾಟಕ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆ ದಶಕಗಳ ಕನಸಿಗೆ ಕೇಂದ್ರ ಸರ್ಕಾರದ ಅನುಮತಿ ಸೂಚಿಸಿದೆ. * ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆಯಾಗಿದೆ. * ಈ ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯಿಂದಾಗಿ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ರೈತರಿಗೆ ಉಪಯೋಗವಾಗುವ ಯೋಜನೆ ಇದಾಗಿದೆ, ಅಂದಾಜು ಈ ಯೋಜನೆಗೆ 21,450 ಕೋಟಿ ರೂ. ವೆಚ್ಚತಗುಲಲಿದೆ ಎಂದು ತಿಳಿಸಲಾಗಿತ್ತು. * ಈ ರಾಷ್ಟ್ರೀಯ ಯೋಜನೆಗೆ ಕೇಂದ್ರ ಸರ್ಕಾರವು ಕೇಂದ್ರದಿಂದ 16,125 ಕೋಟಿ ಅನುದಾನ ನೀಡಲಿದೆ ಎಂದು ತಿಳಿಸಿದೆ. * ರಾಷ್ಟ್ರೀಯ ಯೋಜನೆ ಸ್ಥಾನಮಾನ ಸಿಗಬೇಕಾದರೆ ಹನಿ ನೀರಾವರಿ ಯೋಜನೆ ಅಡಿಯಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶವನ್ನು ಹೊಂದಿರಬೇಕು, ಇದೀಗ ಭದ್ರಾ ಮೇಲ್ದಂಡೆ ಯೋಜನೆಯ 2.25 ಲಕ್ಷ ಹೆಕ್ಟೇರ್ ಪ್ರದೇಶವನ್ನು ಹೊಂದಿದೆ ಇದರಿಂದ ಈ ಎಲ್ಲ ಪ್ರದೇಶಕ್ಕೂ ನೀರಾವರಿ ಸೌಲಭ್ಯ ನೀಡಿದಂತಾಗುತ್ತದೆ. * ಭದ್ರಾ ಮೇಲ್ದಂಡೆ ಯೋಜನೆಗೆ 2003ರಲ್ಲಿ ಒಪ್ಪಿಗೆ ಪಡೆಯಲಾಗಿತ್ತು.