Job Description: * ಹಾಸನ ಜಿಲ್ಲೆಯು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಶೇ. 68 ರಷ್ಟು ಅನುದಾನವನ್ನು ಬಳಕೆ ಮಾಡಿದೆ, ಹಾಗೂ ಅನುದಾನ ಬಳಕೆ ಮಾಡಿಕೊಂಡಿರುವ ಜಿಲ್ಲೆಗಳ ಪೈಕಿ ಇದೆ ಮೊದಲ ಜಿಲ್ಲೆಯಾಗಿ ಹೊರಹೊಮ್ಮಿ ಪ್ರಥಮ ಸ್ಥಾನ ಪಡೆದುಕೊಂಡಿದೆ. * ಉಡುಪಿ ಜಿಲ್ಲೆಯು ಶೇ. 63 ರಷ್ಟು ಅನುದಾನವನ್ನು ಬಳಸಿ 2ನೇ ಸ್ಥಾನ ಪಡೆದುಕೊಂಡಿದೆ. * ಚಿಕ್ಕಮಗಳೂರು ಜಿಲ್ಲೆಯು ಶೇ. 61 ರಷ್ಟು ಅನುದಾನವನ್ನು ಜಿಲ್ಲೆಗಳ ಕಾಮಗಾರಿಗಳಿಗೆ ಬಳಸಿಕೊಂಡು 3ನೇ ಸ್ಥಾನ ಪಡೆದುಕೊಂಡಿದೆ. * ಈ ಮೂರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಗೌರವಿಸಲಾಗುತ್ತದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದರು. * 2019-20 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನಕ್ಕೆ ಶಾಸಕರ ಅನುದಾನದಲ್ಲಿ 2 ಕೋಟಿ ರೂ. ಅನುಮೋದನೆ ನೀಡಲಾಗಿತ್ತು. * ಪ್ರಸ್ತುತ ಈ ವರ್ಷ ಕೋರೋಣ ಸಾಂಕ್ರಾಮಿಕ ರೋಗದಿಂದಾಗಿ ಕೇವಲ 1 ಕೋಟಿ ರೂ. ಅನುಮೋದನೆ ನೀಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ.