Job Description: * ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ರವರು 15 ದಿನಗಳ ಒಳಗಾಗಿ ಜಮ್ಮು-ಕಾಶ್ಮೀರದ ಸರ್ಕಾರಿ ಕಟ್ಟಡ ಮತ್ತು ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ಹಾರಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. * 75ನೇ ಸ್ವಾತಂತ್ರ್ಯೋತ್ಸವದ ವರ್ಷಾಚರಣೆಯ ಹಿನ್ನಲೆಯ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾಧಿಕಾರಿಗಳು, ಆಯುಕ್ತರು ಹಾಗೂ ಪೊಲೀಸ್ ಸುಪರಿಂಟೆಂಡೆಂಟ್ಗಳ ಜೊತೆ ಸಭೆ ನಡೆಸಿ ಸರ್ಕಾರಿ ಕಟ್ಟಡ ಮತ್ತು ಸಂಸ್ಥೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಕುರಿತ ಸೂಚನೆಯನ್ನೂ ನೀಡಿದ್ದಾರೆ. * ದೇಶದಾದ್ಯಂತ ಕೇಂದ್ರ ಸರ್ಕಾರವು 'ಆಜಾದಿ ಕಾ ಅಮೃತ್ ಮಹೋತ್ಸವ್' ಕಾರ್ಯಕ್ರಮಗಳನ್ನು ಆಯೋಜಿಸಿದೆ, ಈ ಕಾರ್ಯಕ್ರಮಕ್ಕೆ ಇದೆ ಮಾರ್ಚ್ 12ರಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದರು.