Job Description: * ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಯವರು ಇತ್ತೀಚಿಗೆ ಪುಣೆಯಲ್ಲಿ 200 ನೇ ಅಂತರ್ರಾಷ್ಟ್ರೀಯ ಪಂದ್ಯವನ್ನು ಮುನ್ನಡೆಸಿದ್ದಾರೆ. * ಇದು ಪುಣೆಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ನಡೆದ ಏಕದಿನ ಸರಣಿಯ ಅಂತಿಮ ಪಂದ್ಯವಾಗಿತ್ತು. * ಈ ಹಿಂದೆ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ನಂತರ ಅಂದರೆ 2017ರ ಜನವರಿಯಲ್ಲಿ ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ನೇಮಕ ಮಾಡಲಾಗಿತ್ತು. * ಪ್ರಸ್ತುತ ವಿರಾಟ್ ಕೊಹ್ಲಿ ಯವರು 60 ಟೆಸ್ಟ್ , 95 ಏಕದಿನ ಮತ್ತು 45 ಟ್ವೆಂಟಿ-20 ಪಂದ್ಯಗಳಲ್ಲಿ ಭಾರತದ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದಾರೆ. * ವಿರಾಟ್ ಕೊಹ್ಲಿ, ಧೋನಿ ಮತ್ತು ಅಝರುದ್ದೀನ್ ಈ ಮೂರು ನಾಯಕರು 200ಕ್ಕಿಂತ ಹೆಚ್ಚು ಅಂತರ್ರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ.