Job Description: * ಪ್ರವಾಸೋಧ್ಯಮ ಇಲಾಖೆಗೆ ಉತ್ತೇಜನ ನೀಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ತಿರುಪತಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ನೀಡಲಿದೆ ಎಂದು ತಿಳಿದು ಬಂದಿದೆ. * ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ಜಮ್ಮು- ಕಾಶ್ಮೀರದ 490 ಕೆನಾಲ್ ಭೂಮಿಯನ್ನು ತಿರುಪತಿ ದೇವಸ್ಥಾನ ನಿರ್ಮಾಣಕ್ಕಾಗಿ ನೀಡಲು ಸರ್ಕಾರ ಸಿದ್ಧವಾಗಿದೆ. * ಜಮ್ಮು- ಕಾಶ್ಮೀರದ ಭೂಮಿಯನ್ನು 40 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ. * ಈ ಟಿಟಿಡಿ ದೇವಸ್ಥಾನ ನಿರ್ಮಾಣದಿಂದ ಜಮ್ಮು ಮತ್ತು ಕಾಶ್ಮೀರ ಪ್ರದೇಶಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ ಮತ್ತು ಪ್ರವಾಸೋದ್ಯಮ ಇಲಾಖೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಸರ್ಕಾರ ತಿಳಿಸಿದೆ.