Job Description: ಛತ್ತೀಸ್ಗಢ ರಾಜ್ಯದ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಇತ್ತೀಚಿಗೆ ಭದ್ರತಾ ಪಡೆ ಮತ್ತು ನಕ್ಸಲರ ಮಧ್ಯೆ ನಡೆದ ಪರಸ್ಪರ ಗುಂಡಿನ ದಾಳಿಯಿಂದಾಗಿ ಒಟ್ಟು 22 ಮಂದಿ ಭಾರತೀಯ ಯೋಧರು ಹುತಾತ್ಮರಾಗಿರುವುದಾಗಿ ಹಾಗು 30ಕ್ಕೂ ಹೆಚ್ಚು ಮಂದಿ ಭದ್ರತಾ ಪಡೆಯ ಯೋಧರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಛತ್ತೀಸ್ಗಢದಲ್ಲಿ ಮಾವೋವಾದಿಗಳ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಭದ್ರತಾ ಪಡೆಗಳ ಯೋಧರು ಹುತಾತ್ಮರಾಗಿದ್ದು, ಈ ಘಟನೆ ಅತ್ಯಂತ ದುಃಖಕರ ವಿಚಾರವಾಗಿದ್ದು, ಘಟನೆಯಲ್ಲಿ ಹುತಾತ್ಮರಾದ ಯೋಧರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿ ರಾಷ್ಟ್ರಪತಿ ಸೇರಿ ಪ್ರಮುಖ ಗಣ್ಯರು ಸಂತಾಪ ಸೂಚಿಸಿದ್ದಾರೆ.