Job Description: ಫೋರ್ಬ್ಸ್ ಇತ್ತೀಚಿಗೆ ವಿಶ್ವದ ಸಿರಿವಂತರ ಕುರಿತಾದ 35ನೇ ವಾರ್ಷಿಕ ಪಟ್ಟಿಯನ್ನು ಪ್ರಕಟಿಸಿದ್ದು, ಅಮೆಜಾನ್ ಸಂಸ್ಥೆಯ ಸಿಇಒ ಹಾಗೂ ಸಂಸ್ಥಾಪಕ ಜೆಫ್ ಬೇಜೋಸ್ ಅವರು ಸತತ ನಾಲ್ಕನೇ ಬಾರಿಗೆ ವಿಶ್ವದ ಅಗ್ರಗಣ್ಯ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ನ ಸಿಇಒ ಎಲೋನ್ ಮಸ್ಕ್ ಸ್ಥಾನ ಪಡೆದಿದ್ದಾರೆ. * ಭಾರತದ ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥ ಮುಕೇಶ್ ಅಂಬಾನಿಯವರು ಈ ಪಟ್ಟಿಯಲ್ಲಿ 10 ನೇ ಸ್ಥಾನ ಪಡೆದುಕೊಂಡಿದ್ದಾರೆ. ಹಾಗು ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. * ಇನ್ನು ಜಗತ್ತಿನಲ್ಲಿ ಅತಿ ಹೆಚ್ಚು ಶತಕೋಟ್ಯಧೀಶರನ್ನು ಹೊಂದಿದ ರಾಷ್ಟ್ರಗಳ ಪೈಕಿ ಅಮೆರಿಕಾ ಮೊದಲ ಸ್ಥಾನ, ಚೀನಾ ಎರಡನೇ ಸ್ಥಾನ ಹಾಗು ಮೂರನೇ ರಾಷ್ಟ್ರ ಭಾರತ ಎಂದು ಫೋರ್ಬ್ಸ್ ವರದಿ ಮಾಡಿದೆ.