Job Description: * 2020ನೇ ಸಾಲಿನ ಗೋಲ್ಡನ್ ಪೀಕಾಕ್, ರಾಷ್ಟ್ರೀಯ ಪ್ರಶಸ್ತಿಯನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಡೆದುಕೊಂಡಿದೆ. * ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಮ್ಮಿಕೊಂಡಿರುವ 'ನಮ್ಮ ಶಿಕ್ಷಣ' ಕಾರ್ಯಕ್ರಮಕ್ಕೆ ಪುರಸ್ಕಾರ ಲಭಿಸಿದೆ. * ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು 'ನಮ್ಮ ಶಿಕ್ಷಣ' ಕಾರ್ಯಕ್ರಮದ ಅಡಿಯಲ್ಲಿ 5 ಸರ್ಕಾರಿ ಶಾಲೆಗಳನ್ನು ಸ್ಥಾಪಿಸಿದೆ ಮತ್ತು 6 ಶಾಲೆಗಳನ್ನು ಉತ್ತಮ ರೀತಿಯಲ್ಲಿ ಸುಧಾರಿಸಿದೆ ಎಂದು ತಿಳಿಸಿದೆ. * ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ಬಗ್ಗೆ ಮಾಹಿತಿ : * ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ 4700 ಎಕರೆಗಳ ವಿಸ್ತಾರ ಹೊಂದಿದೆ. * ಬೆಂಗಳೂರು ಮಧ್ಯ ಭಾಗದಿಂದ ಸುಮಾರು 40 ಕಿ.ಮೀ. ದೂರದಲ್ಲಿ ದೇವನಹಳ್ಳಿಯಲ್ಲಿದೆ. * ಹೆಚ್.ಎ.ಎಲ್ ವಿಮಾನ ನಿಲ್ದಾಣದ ಕೊರತೆಯಿಂದ ಹೊಸದಾಗಿ ಜುಲೈ 2005 ರಲ್ಲಿ ಇದರ ಕಟ್ಟುವಿಕೆ ಪ್ರಾರಂಭವಾಗಿ, ಮೇ 23 ,2008 ರಂದು ತನ್ನ ಕಾರ್ಯಾರಂಭ ಮಾಡಿತು. * ಇದು ಪ್ರಯಾಣಿಕರ ಬಳಸುವಿಕೆಯಲ್ಲಿ ಭಾರತದ ಮೂರನೇ ಅತಿ ದೊಡ್ಡ ವಿಮಾನ ನಿಲ್ದಾಣ.