Job Description: * ಕೊರೋನ ವೈರಸ್'ನಿಂದಾಗಿ ತೀವ್ರವಾಗಿ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆಗೆ ನೀಡಲು ಹೆಚ್ಚಿನ ಸಂಖ್ಯೆಯಲ್ಲಿ ಆಮ್ಲಜನಕ ಬೇಕಾಗುವ ಉದ್ದೇಶದಿಂದ, 9 ಉದ್ದಿಮೆಗಳನ್ನು ಬಿಟ್ಟು ಉಳಿದೆಲ್ಲಾ ಕೈಗಾರಿಕೆಗಳಿಗೆ ಆಮ್ಲಜನಕ ಒದಗಿಸುವದನ್ನು ಕೇಂದ್ರ ಸರ್ಕಾರವು ನಿಷೇಧಿಸಿದೆ. * ಪ್ರಸ್ತುತ ಕೈಗಾರಿಕೆಗಳಿಗೆ ನೀಡುತ್ತಿರುವ ಆಮ್ಲಜನಕವನ್ನು ಆಸ್ಪತ್ರೆಗಳಿಗೆ ಪೂರೈಸುವಂತೆ ಕೇಂದ್ರ ಸರ್ಕಾರವು ಆದೇಶವನ್ನು ನೀಡಿದೆ. * ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಯಾಗಿರುವ ಅಜಯ್ ಭಲ್ಲಾ ಅವರು ಲಿಖಿತ ರೂಪದಲ್ಲಿ ಪತ್ರ ನೀಡಿದ್ದಾರೆ, ಹಾಗೂ ಈ ಆದೇಶವು ಏಪ್ರಿಲ್. 22ರಿಂದ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.