Job Description: * ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಇ-ಪ್ರಾಪರ್ಟಿ ಕಾರ್ಡ್ ವಿತರಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ. * ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚಾರಣೆ ಅಂಗವಾಗಿ 4.09 ಲಕ್ಷ ಜನರಿಗೆ ಸಂಬಂಧಪಟ್ಟ ಆಸ್ತಿ ಮಾಲೀಕತ್ವದ ಇ-ಪ್ರಾಪರ್ಟಿ ಕಾರ್ಡುಗಳನ್ನು ವಿತರಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಲಾಗಿದೆ. * ಈ ಯೋಜನೆ ಜಾರಿಯಾದ ನಂತರ ದೇಶದ ಜನರು ತಮ್ಮ ಆಸ್ತಿ ಅಥವಾ ಪ್ರಾಪರ್ಟಿ ಕಾರ್ಡ್ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ, ನಂತರ ಆಸ್ತಿ ಕಾರ್ಡ್ ಗಳನ್ನು ರಾಜ್ಯ ಸರ್ಕಾರಗಳು ಭೌತಿಕವಾಗಿ ನೀಡುತ್ತವೆ. * ಈ ಇ-ಪ್ರಾಪರ್ಟಿ ಕಾರ್ಡ್ ಯೋಜನೆಯ ಮೂಲಕ ಬ್ಯಾಂಕಿನಿಂದ ಸಾಲ ಪಡೆಯಲು ಗ್ರಾಮೀಣ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಲಾಗಿದೆ. * 2020-21ನೇ ಅವಧಿಯಲ್ಲಿ ಇ-ಪ್ರಾಪರ್ಟಿ ಕಾರ್ಡ್ ಯೋಜನೆಯನ್ನು ಮಹಾರಾಷ್ಟ್ರ, ಕರ್ನಾಟಕ, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಮಧ್ಯಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದ ಆಯ್ಕೆ ಮಾಡಲಾದ ಕೆಲ ಹಳ್ಳಿಗಳಲ್ಲಿ ಯೋಜನೆಯ ಪ್ರಾಯೋಗಿಕ ಜಾರಿಗೆ ತರಲಾಯಿತು ಎಂದು ತಿಳಿಸಿದ್ದಾರೆ. .