Job Description: * ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ರಮಣ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಪ್ರಮಾಣ ವಚನ ಸ್ವೀಕಾರ ಮಾಡಿದರು. * ಏಪ್ರಿಲ್ 23ರಂದು ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರ ಅಧಿಕಾರ ಮುಕ್ತಾಯವಾದ ಹಿನ್ನಲೆಯಿಂದಾಗಿ ಎನ್.ವಿ. ರಮಣ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. * ಪ್ರಸ್ತುತ ಇವರು ಆಂಧ್ರ ಪ್ರದೇಶ ಹೈಕೋರ್ಟ್ನಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ಮೊದಲ ನ್ಯಾಯಮೂರ್ತಿಯಾಗಿದ್ದಾರೆ. * ಎನ್.ವಿ. ರಮಣ ಅವರು 1983ರಲ್ಲಿ ವಕೀಲ ವೃತ್ತಿಯನ್ನು ಪ್ರಾಂಭಿಸಿದರು ಮತ್ತು 2000ರಲ್ಲಿ ಆಂಧ್ರಪ್ರದೇಶ ಹೈಕೋರ್ಟ್ನ ಖಾಯಂ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.