Job Description: * ಕರ್ನಾಟಕ ರಾಜ್ಯದಲ್ಲಿ ಕೋರೋಣ ವೈರಸ್ ಸಾಂಕ್ರಾಮಿಕ ರೋಗದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ, ಈ ನಿಟ್ಟಿನಲ್ಲಿ ರಾಜ್ಯದ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಆಕ್ಸಿಜನ್ ನೀಡಲು ಆರೋಗ್ಯ ಇಲಾಖೆಯು 10 ಜಿಲ್ಲಾಆಸ್ಪತ್ರೆ ಮತ್ತು 30 ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮತಿಯನ್ನು ನೀಡಿದೆ. * ಪ್ರಸ್ತುತ ರಾಜ್ಯದ 10 ಜಿಲ್ಲಾ ಆಸ್ಪತ್ರೆಗಳಲ್ಲಿ 500 ಎಲ್ಪಿಎಂ ಹಾಗೂ 30 ತಾಲೂಕು ಆಸ್ಪತ್ರೆಗಳಲ್ಲಿ 390 ಎಲ್ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕಗಳನ್ನೂ ನಿರ್ಮಾಣ ಮಾಡಲು ಅನುಮತಿ ನೀಡಿದೆ ಈ ಘಟಕಗಳು ಪಿಎಸ್ಎ ತಂತ್ರಜ್ಞಾನದ ಅಡಿಯಲ್ಲಿ ನಿರ್ಮಾಣವಾಗಲಿವೆ.