Job Description: * ಇತ್ತೀಚಿಗೆ ತಮಿಳುನಾಡು ರಾಜ್ಯದಲ್ಲಿ ವಿಧಾನಸಭೆಗಳ ಚುನಾವಣೆಗಳು ನಡೆದಿದ್ದವು ಅವುಗಳಲ್ಲಿ ತಮಿಳುನಾಡಿನ ಡಿಎಂಕೆ ಪಕ್ಷವು ಗೆಲುವು ಸಾಧಿಸಿತ್ತು. * ಇದೀಗ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ತಮಿಳುನಾಡು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ಸ್ವೀಕರಿಸಿದರು, ಜೊತೆಗೆ 33 ಶಾಸಕರು ಕೂಡ ಸಚಿವ ಸ್ಥಾನದ ಅಧಿಕಾರ ವಹಿಸಿಕೊಂಡರು. * ತಮಿಳುನಾಡಿನ ರಾಜ್ಯಪಾಲರಾಗಿರುವ ಬನ್ವರಿಲಾಲ್ ಪುರೋಹಿತ್ ಅವರು ಚೆನೈನ ರಾಜಭವನದಲ್ಲಿ ಎಂ ಕೆ ಸ್ಟಾಲಿನ್ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. * ಪ್ರಸ್ತುತ ಡಿಎಂಕೆ ಪಕ್ಷದ ಮುಖ್ಯಸ್ಥ 69 ವರ್ಷದ ಎಂ ಕೆ ಸ್ಟಾಲಿನ್ ಅವರು ಅಧಿಕಾರವನ್ನು ಸ್ವೀಕರಿಸಿದರು, ಈ ಮೂಲಕ ತಮಿಳನಾಡು ಸರ್ಕಾರದ ಇತಿಹಾಸದಲ್ಲಿಯೇ ಅತ್ಯಂತ ಹಿರಿಯ ವಯಸ್ಸಿನ ನಾಯಕ ಇದೇ ಮೊದಲಬಾರಿಗೆ ಮುಖ್ಯಮಂತ್ರಿ ಸೇವೆ ಸಲ್ಲಿಸಲು ಆರಂಭಿಸಿದ್ದಾರೆ. * ತಮಿಳುನಾಡಿನಲ್ಲಿ ಎಂ.ಕೆ.ಸ್ಟಾಲಿನ್'ಅವರು 2018 ಆಗಸ್ಟ್. 28 ರಿಂದ ಡಿಎಂಕೆ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.