Job Description: * ಇತ್ತೀಚಿಗೆ ಪಶ್ಚಿಮ ಬಂಗಾಳದ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದವು ಅದರಲ್ಲಿ TMC ಪಕ್ಷವು ಗೆಲುವು ಸಾಧಿಸಿದೆ. * ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅವರು ಪ್ರಮಾಣ ವಚನ ಸ್ವೀಕರಿಸಿದರು. * ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಜಗದೀಪ್ ಧನ್ಖಡ್'ಅವರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ TMC ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು. * ಪಶ್ಚಿಮ ಬಂಗಾಳದ ನಂದಿಗ್ರಾಮದ ಕ್ಷೇತ್ರದಲ್ಲಿ ಬಿಜೆಪಿಯ ಸುವೇಂದ್ರ ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಅವರು ಸೋಲುಕಂಡರು ಮಮತಾ ಅವರಿಗೆ ಕಾನೂನಿನ ಅಡಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅವಕಾಶವಿತ್ತು. * ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದ ಕ್ಷೇತ್ರದಲ್ಲಿ ಸೋಲು ಅನಿಭವಿಸಿದ್ದಾರೆ ಪ್ರಸ್ತುತ ಇವರು ಸಿಎಂ ಸ್ಥಾನದಲ್ಲಿ ಮುಂದುವರೆಯಲು 6 ತಿಂಗಳ ಒಳಗೆಡೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕು, ಅಥವಾ ಯಾವುದಾದರೂ ಖಾಲಿ ಇರುವ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಉಪಚುನಾವಣೆಯಲ್ಲಿ ಗೆಲ್ಲಬೇಕು, ಒಂದು ಪಕ್ಷ ಅಲ್ಲಿ ಸೋತರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. * ಪ್ರಸ್ತುತ ಪಶ್ಚಿಮ ಬಂಗಾಳದಲ್ಲಿ ವಿಧಾನಪರಿಷತ್ ನಿರ್ಮೂಲನ ಮಾಡಲಾಗಿದೆ, ಸದ್ಯ ಇವರು ಉಪ ಚುನಾವಣೆಯ ಮೂಲಕವೇ ಗೆಲ್ಲಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ. * ಪಶ್ಚಿಮ ಬಂಗಾಳದಲ್ಲಿ ಒಟ್ಟಾರೆ 292 ವಿಧಾನಸಭೆ ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದೆ ಅದರಲ್ಲಿ TMC ಪಕ್ಷವು 213 ಸ್ಥಾನ ಗೆದ್ದುಕೊಂಡಿದೆ.