Job Description: * ಮಕ್ಕಳ ಮೇಲೆ ಕೊವ್ಯಾಕ್ಸಿನ್ ಟ್ರಯಲ್ ಮಾಡಲಾಗುತ್ತಿದೆ ಇದಕ್ಕೆ ತಜ್ಞರ ಸಮಿತಿ ಶಿಫಾರಸ್ತು ಮಾಡಿದೆ ಸದ್ಯ 525 ಮಂದಿ ಮಕ್ಕಳ ಮೇಲೆ ಪರೀಕ್ಷೆ ನಡೆಯಲಿದೆ. * ಪ್ರಸ್ತುತ ಭಾರತದಲ್ಲಿ ಕೋವಿಡ್-19 ಎರಡನೇ ಅಲೆಯ ಅತೀ ಹೆಚ್ಚಾಗಿ ಯುವ ಜನತೆ ಮೇಲೆ ಪ್ರಭಾವ ಬೀರುತ್ತಿದೆ, ಮುಂದಿನ ದಿನಗಳಲ್ಲಿ 3ನೇ ಅಲೆ ಮಕ್ಕಳಿಗೆ ಅಪಾಯಕಾರಿ ಆಗಬಹುದು ಎಂದು ತಜ್ಞರ ಅಭಿಪ್ರಾಯವನ್ನು ತಿಳಿಸಿದ್ದಾರೆ, ಇದರ ಹಿನ್ನಲೆಯಿಂದಾಗಿ ಇದೀಗ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದ ಮಕ್ಕಳ ಮೇಲೆ ಕ್ಲಿನಿಕಲ್ ಟ್ರಯಲ್ ನಡೆಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮತಿಯನ್ನು ನೀಡಿದೆ. * ತಜ್ಞರ ಸಮಿತಿಯು ಪ್ರಾಯೋಗಿಕ ಪರೀಕ್ಷೆ ನಡೆಸಲು ಶಿಫಾರಸ್ಸು ಮಾಡಿದ್ದಾರೆ. ದೇಶದಲ್ಲಿ ಇದೇ ಮೊದಲ ಬಾರಿ ಮಕ್ಕಳ ಮೇಲೆ ಕರೊನಾ ಲಸಿಕೆ ಕ್ಲಿನಿಕಲ್ ಟ್ರಯಲ್ ನಡೆಸಲಾಗುತ್ತಿದೆ ಹಾಗೂ ಇದಕ್ಕೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. * ದೇಶದ ವಿವಿಧ ಭಾಗಗಳಲ್ಲಿ ಪ್ರಯೋಗವು ಒಟ್ಟು 525 ಮಂದಿ ಮಕ್ಕಳ ಮೇಲೆ ಟ್ರಯಲ್ ನಡೆಯಲಿದೆ, ಈ ಲಸಿಕೆಯಿಂದ ಮಕ್ಕಳಿಗೆ ಯಾವುದೇ ತರಹದ ಅಡ್ಡ ಪರಿಣಾಮ ಇಲ್ಲ ಎಂದು ಖಚಿತವಾದ ಮೇಲೆ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.