Job Description: * ಪ್ರಸ್ತುತ ಭಾರತ್ ಬಯೋಟೆಕ್'ನಿಂದ ಕರ್ನಾಟಕ, ಗುಜರಾತ್, ಅಸ್ಸಾಂ, ತಮಿಳುನಾಡು, ಒಡಿಶಾ ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊರೋನಾ ಲಸಿಕೆಗಳನ್ನು ರವಾನೆ ಮಾಡಲಾಗಿದೆ ಎಂದು ಭಾರತ್ ಬಯೋಟೆಕ್ ಮಾಹಿತಿಯನ್ನು ನೀಡಿದೆ. * ಇತ್ತೀಚಿಗೆ ರಾಜ್ಯಗಳಲ್ಲಿ ಕೋವ್ಯಾಕ್ಸಿನ್ ಲಸಿಕೆ ಸರಬರಾಜು ಆಗುತ್ತಿಲ್ಲ ಎಂದು ಆರೋಪಗಳು ಕೇಳಿಬರುತ್ತಿದ್ದವು ಈ ಕಾರಣದಿಂದಾಗಿ ಭಾರತ್ ಬಯೋಟೆಕ್ ಪ್ರತಿಕ್ರಿಯೆ ನೀಡಿದೆ. * ಭಾರತ್ ಬಯೋಟೆಕ್ ಸಹ-ಸಂಸ್ಥಾಪಕಿ ಹಾಗೂ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಅವರು ಈ ಮೇಲೆ ತಿಳಿಸಿರುವ ಎಲ್ಲ ರಾಜ್ಯಗಳಿಗೆ ಕೋವ್ಯಾಕ್ಸಿನ್ ಕೊರೋನಾ ಲಸಿಕೆಗಳನ್ನು ರವಾನಿಸಲಾಗಿದೆ, ಜೊತೆಗೆ ಇನ್ನುಳಿದ ರಾಜ್ಯಗಳಿಗೆ ರವಾನೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ಭಾರತ್ ಬಯೋಟೆಕ್ ಸಂಸ್ಥೆಯಿಂದ ಮೇ.10 ರಂದು ಒಟ್ಟು 18 ರಾಜ್ಯಗಳಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ರವಾನಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.