Job Description: * ಕಾಶ್ಮೀರದ ಮಾಜಿ ಡಿಎಸ್ಪಿ ದೇವಿಂದರ್ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗೆ ನೆರವಾದ ಆರೋಪದ ಹಿನ್ನಲೆಯಿಂದಾಗಿ ಇವರನ್ನು ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಆಡಳಿತ ಅಧಿಕೃತವಾಗಿ ಪ್ರಕಟಣೆಯನ್ನು ಹೊರಡಿಸಿದೆ. * ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂವಿಧಾನದ ಆರ್ಟಿಕಲ್ 311 ಅನ್ವಯದ ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮಾಜಿ ಡಿಎಸ್ಪಿ ದೇವಿಂದರ್ ಸಿಂಗ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. * DSP ದೇವಿಂದರ್ ಸಿಂಗ್ ಅವರು ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರ ಜೊತೆ ಸಿಕ್ಕಿ ಬಿದ್ದ ಕಾರಣದಿಂದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿ FIR ಹಾಕಿದ್ದಾರೆ.