Job Description: * ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷರಾಗಿರುವ ಶ್ರೀಕುಮಾರ್ ಬ್ಯಾನರ್ಜಿ ಅವರು ತಮ್ಮ 70ನೇ ವಯಸ್ಸಿನಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. * ಪರಮಾಣು ಶಕ್ತಿ ಆಯೋಗದ ಅಧ್ಯಕ್ಷ ಸ್ಥಾನ ಹಾಗೂ ಪರಮಾಣು ಶಕ್ತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಶ್ರೀಕುಮಾರ್ ಬ್ಯಾನರ್ಜಿ ಅವರು 2012ರಲ್ಲಿ ನಿವೃತ್ತಿ ಹೊಂದಿದ್ದರು. * ಶ್ರೀಕುಮಾರ್ ಬ್ಯಾನರ್ಜಿ ಇವರಿಗೆ ಪದ್ಮಶ್ರೀ ಪುರಸ್ಕಾರವು 2005ರಲ್ಲಿ ಮತ್ತು ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯು 1989ರಲ್ಲಿ ಲಭಿಸಿತ್ತು, ಇವರು 2010ರ ತನಕ ಸುಮಾರು 6ವರ್ಷಗಳ ವರೆಗೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.