Job Description: * ಪ್ರಸ್ತುತ ಗೋವಾ ಸರ್ಕಾರವು ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆಯನ್ನು ರದ್ಧುಗೊಳಿಸಿ ಆದೇಶ ಹೊರಡಿಸಿದೆ, ಮತ್ತು ಇನ್ನೆರಡು ದಿನಗಳಲ್ಲಿ12ನೇ ತರಗತಿಯ ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ಗೋವಾ ಸರ್ಕಾರವು ಮಾಹಿತಿಯನ್ನು ನೀಡಿದೆ. * ಪ್ರಸ್ತುತ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರು ಕೋವಿಡ್-19 ಸೋಂಕಿನ ಪರಿಸ್ಥಿತಿಯಿಂದಾಗಿ ಈ ವರ್ಷದ 10ನೇ ತರಗತಿ ಪರೀಕ್ಷೆಯನ್ನು ರದ್ಧುಮಾಡಲು ಸರ್ಕಾರವು ನಿರ್ಧಾರ ತೆಗೆದುಕೊಳ್ಳಲಾಗಿದೆ, ಮತ್ತು ಗೋವಾ ಬೋರ್ಡ ಆಫ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಶಾಲಾ ಶಿಕ್ಷಣ ಮಂಡಳಿ, ರಾಜ್ಯ ಶಿಕ್ಷಣ ಇಲಾಖೆ, ಶೈಕ್ಷಣಿಕ ಕ್ಷೇತ್ರದ ತಜ್ಞರು ಒಳಗೊಂಡ ಸಮೀತಿಯ ಶಿಫಾರಸ್ಸನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪಣಜಿಯಲ್ಲಿ ನಡೆದ ಸುದ್ದಿಘೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದ್ದಾರೆ. * ಈಗಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅವರ ಆಂತರಿಕ ಪರೀಕ್ಷೆಯ ಮೌಲ್ಯಮಾಪನದ ಆಧಾರದ ಮೇಲೆ ಪರೀಕ್ಷಾ ಫಲಿತಾಂಶಗಳನ್ನು ನಿಡಲಾಗುತ್ತದೆ, ಮುಂಬರುವ ಪಿಯುಸಿಯಲ್ಲಿ ವಿಜ್ಞಾನ ವಿಷಯ ಮತ್ತು ಡಿಪ್ಲೊಮ ಕೋರ್ಸ್'ಗಳಿಗೆ ಪ್ರವೇಶ ಪಡೆಯುಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಒಂದು ದಿನದ ಪರೀಕ್ಷೆಗೆ ಒಳಪಡಬೇಕಾಗುತ್ತದೆ ಎಂಬ ಸೂಚನೆಯನ್ನು ನೀಡಿದ್ದಾರೆ.