Job Description: * ಭಾರತ ದೇಶದ ತುಂಬೆಲ್ಲ ಕೊರೋನಾ ವೈರಸ್ ಸೋಂಕು ಹೆಚ್ಚಿದ ಸಮಯದಲ್ಲಿ ಕೋವಿಡ್-19 ರೋಗಿಗಳಿಗೆ ಆಕ್ಸಿಜನ್ ಪೂರೈಕೆ ಮಾಡುವಲ್ಲಿ ಭಾರತೀಯ ರೈಲ್ವೆ ಇಲಾಖೆಯು ಪ್ರಮುಖ ಪಾತ್ರವನ್ನು ವಹಿಸಿದೆ. * ಪ್ರಸ್ತುತ ಭಾರತೀಯ ರೈಲ್ವೆ ಇಲಾಖೆಯು ಬೇರೆ ಬೇರೆ ರಾಜ್ಯಗಳಿಗೆ ಸುಮಾರು 884 ಟ್ಯಾಂಕರ್ಗಳ ಮೂಲಕ 14,500 ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ, ಇಲ್ಲಿಯವರೆಗೆ 224 ಆಕ್ಸಿಜನ್ ಎಕ್ಸ್ ಪ್ರೆಸ್ ರೈಲುಗಳು ತಮ್ಮ ಸಂಚಾರವನ್ನು ಪೂರ್ಣಗೊಳಿಸಿವೆ ಮತ್ತು 563 ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಹೊತ್ತ 8 ರೈಲುಗಳು ತಮ್ಮ ಸಂಚಾರದ ಹಾದಿಯಲ್ಲಿ ಸಾಗುತ್ತಿವೆ ಎಂದು ತಿಳಿಸಿದೆ. * ಪ್ರತಿದಿನವು ಭಾರತೀಯ ರೈಲ್ವೆ ಇಲಾಖೆಯು ಬೇರೆ ಬೇರೆ ರಾಜ್ಯಗಳಿಗೆ 800 ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ನ್ನು ಪೂರೈಕೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆಯು ಮಾಹಿತಿಯನ್ನು ನೀಡಿದೆ.