Job Description: * ಜಮ್ಮು ಹಾಗೂ ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕಪ್ಪು ಶಿಲೀಂಧ್ರ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿದ್ದಾರೆ. * ಕೇಂದ್ರ ಸರಕಾರವು ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸರ್ಕಾರವು 1897ರ ಸಾಂಕ್ರಾಮಿಕ ರೋಗ ಕಾಯ್ದೆ ಅಡಿಯಲ್ಲಿ ಕಪ್ಪು ಶಿಲೀಂಧ್ರ ಸೋಂಕನ್ನು ಗಂಭೀರ ಕಾಯಿಲೆ ಎಂದು ಪರಿಗಣಿಸುವಂತೆ ಸೂಚಿಸಿದ ನಂತರ ಜಮ್ಮು ಹಾಗೂ ಕಾಶ್ಮೀರ ಸರ್ಕಾರವು ಈ ನಿರ್ಧಾರವನ್ನು ಕೈಗೊಂಡಿದೆ. * ಶ್ರೀನಗರ ಸರಕಾರಿ ದಂತ ವೈದ್ಯಕೀಯ ಕಾಲೇಜಿನ ಓರಲ್ ಆಯಂಡ್ ಮ್ಯಾಸ್ಸಿಲ್ಲೊಫೇಸಿಯಲ್ ಸರ್ಜರಿ ಘಟಕದ ಆರೋಗ್ಯ ಅಧಿಕಾರಿಗಳು ಇಲ್ಲಿನ ಆಸ್ಪತ್ರೆಯಲ್ಲಿ 2020 ನವೆಂಬರ್'ನಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ಪ್ರಕರಣವೊಂದರ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.