Job Description: * ಭಾರತ ರತ್ನ ಪುರಸ್ಕೃತ ಖ್ಯಾತ ವಿಜ್ಞಾನಿಯಾಗಿರುವ ಪ್ರಾಧ್ಯಾಪಕ ಸಿ.ಎನ್.ಆರ್ ರಾವ್ ಅವರಿಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಇಎನ್ಐ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹೇಳಿದೆ. * ವಿಜ್ಞಾನಿ ಸಿ.ಎನ್.ಆರ್ ರಾವ್ ಅವರು ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಸಂಗ್ರಹಣೆಯ ಸಂಶೋಧನೆಗಾಗಿ ಈ ಪ್ರಶಸ್ತಿಯು ಇವರಿಗೆ ಲಭಿಸಿದೆ, ಈ ಪ್ರಶಸ್ತಿಯನ್ನು ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಎಂದು ಕರೆಯುತ್ತಾರೆ, ಮತ್ತು ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. * ಈ ಪ್ರಶಸ್ತಿಯನ್ನು ರೋಮ್'ನಲ್ಲಿ ಅಕ್ಟೋಬರ್. 14ರಂದು ನಡೆಯುವ ಸಮಾರಂಭದಲ್ಲಿ ಅಧಿಕೃತವಾಗಿ ವಿಜ್ಞಾನಿ ಸಿ.ಎನ್.ಆರ್ ರಾವ್ ಅವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.