Job Description: * ಕೋವಿಡ್-19 ಸಂಧರ್ಭದಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರವು ಇದೀಗ ರಾಜ್ಯದಲ್ಲಿ ಎಸ್ಮಾ ಜಾರಿಗೆ ಮಾಡಿದೆ, ಇದೀಗ ಉತ್ತರ ಪ್ರದೇಶದ ಯೋಗಿ ಸರ್ಕಾರವು ತಮ್ಮ ರಾಜ್ಯದಲ್ಲಿನ ಯಾರನ್ನು ಬೇಕಾದರೂ ಬಂಧಿಸಲು ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದೆ. * ಎಸ್ಮಾ ಕಾಯಿದೆಯನ್ನು ಉತ್ತರ ಪ್ರದೇಶದಲ್ಲಿ ಜಾರಿಗೆ ತರಲಾಗಿದೆ, ಈ ಕಾಯ್ದೆ ಅಡಿಯಲ್ಲಿ 6 ತಿಂಗಳವರೆಗೆ ಯಾವುದೇ ಮುಷ್ಕರ, ಪ್ರತಿಭಟನೆ ನಡೆಸಲು ಅವಕಾಶ ಇರುವುದಿಲ್ಲ ಎಂದು ಆದೇಶ ಹೊರಡಿಸಿದೆ, ಇದೀಗ ರಾಜ್ಯದಲ್ಲಿ ವಾರೆಂಟ್ ಇಲ್ಲದೆ ಯಾರನ್ನು ಬೇಕಾದರೂ ಬಂಧಿಸಲು ರಾಜ್ಯದ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದೆ ಎಂದು ಯೋಗಿ ಆದಿತ್ಯನಾಥ ಸರ್ಕಾರವು ತಿಳಿಸಿದೆ. * ಪ್ರಸ್ತುತ ಉತ್ತರ ಪ್ರದೇಶದ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿ ನಡುವೆಯು ಇಲ್ಲಿನ ಅನೇಕ ಸರ್ಕಾರಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಮುಷ್ಕರ ನಡೆಸಲು ತಯಾರಿ ನಡೆಸುತ್ತಿದ್ದಾರೆ, ಈ ನಿಟ್ಟಿನಲ್ಲಿ ಇದಕ್ಕೆ ಕಡಿವಾಣ ಹಾಕಲು ಯೋಗಿ ಸರ್ಕಾರವು ಈ ನಿರ್ಧಾರವನ್ನು ತಗೆದುಕೊಂಡಿದೆ ಎಂದು ತಿಳಿದು ಬಂದಿದೆ.