Job Description: * ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಸಮ್ಮುಖದಲ್ಲಿ ದೆಹಲಿಯಲ್ಲಿ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ನಡೆಸಲಾಯಿತು ಈ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡರು ಅದುವೇ ಬೇರೆ ಬೇರೆ ದೇಶಗಳಿಂದ ರಾಜ್ಯಗಳಿಗೆ ಬರುವ ಕೋವಿಡ್-19 ಸಂಬಂಧಿತ ವೈದ್ಯಕೀಯ ಉಪಕರಣಗಳ ಮೇಲೆ ಆಮದು ತೆರಿಗೆ ವಿನಾಯಿತಿ (IGST) ನೀಡಲು ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. * ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021ರ ಆಗಸ್ಟ್ 31ರವರೆಗೆ ಕೋವಿಡ್-19 ಸಂಬಂದಪಟ್ಟ ಸರಬರಾಜಿನಲ್ಲಿ GSTಗೆ ವಿನಾಯಿತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. * ಈ GST ವಿನಾಯಿತಿ ನೀಡಿರುವದರಿಂದ ಆದಾಯಕ್ಕೆ ನಷ್ಟ ಉಂಟಾಗುತ್ತದೆ ಇದರಿಂದಾಗಿ ರಾಜ್ಯಗಳಿಗೆ ಪರಿಹಾರ ಒದಗಿಸಿಕೊಡಲು ಕೇಂದ್ರ ಸರ್ಕಾರವು 1.58 ಲಕ್ಷ ಕೋಟಿ ರೂ.ಗಳನ್ನು ಸಾಲ ಮಾಡಲಿದೆ ಎಂದು ನಿರ್ಮಲ ಸೀತಾರಾಮನ್ ಅವರು ತಿಳಿಸಿದ್ದಾರೆ, ಇದರ ಜೊತೆಯಲ್ಲಿ 2022ರ ಜೂನ್ ತಿಂಗಳಿನ ನಂತರ GST ಪರಿಹಾರ ಸೆಸ್ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಏರ್ಪಡಿಸಲಾಗುವದು ಎಂದು ತಿಳಿಸಿದ್ದಾರೆ. * ಕೋವಿಡ್-19 ಸಂಬಂಧಿತ ವೈದ್ಯಕೀಯ ಸಲಕರಣೆಗಳ ಮೇಲಿನ GSTದರ ಕಡಿಮೆ ಗೊಳಿಸುವ ವಿಷಯದ ಬಗ್ಗೆ ಚರ್ಚಿಸಲಾಗಿದೆ ಮತ್ತು ಅಂತಿಮ ತೀರ್ಮಾನವನ್ನು ಪರಿಗಣಿಸಿ ಇದೇ ಜೂನ್. 8ರಂದು ವರದಿ ತಿಳಿಸಲಾಗುವುದು ಎಂದು ಸಚಿವೆ ನಿರ್ಮಲ ಸೀತಾರಾಮನ್ ಅವರು ಹೇಳಿದ್ದಾರೆ.