Job Description: * ಪ್ರಸ್ತುತ ಮಹಾರಾಷ್ಟ್ರ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು (Board Exams) ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಿಳಿಸಿದ್ದಾರೆ, ಮತ್ತು ಇದು ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. * ಇದರ ಜೊತೆಯಲ್ಲಿ12ನೇ ತರಗತಿಯ ಪರೀಕ್ಷೆಗಳನ್ನೂ ರದ್ದುಮಾಡುವ ಕುರಿತು ನಮ್ಮ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನಿಲುವನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದರು.