Job Description: * ಇದೇ ಮೊದಲ ಬಾರಿಗೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು(ಬಿಹಾರ್) ಪಾಟ್ನಾದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಮಕ್ಕಳ ಮೇಲೆ ಪ್ರಯೋಗವನ್ನು ಪ್ರಾಂಭಿಸಿದೆ. * ಇದೇ ಮೇ.11 ರಂದು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್'ನ ಕೋವ್ಯಾಕ್ಸಿನ್ ಲಸಿಕೆ ಬಳಕೆಗೆ ಭಾರತೀಯ ಪ್ರಧಾನ ಔಷಧ ನಿಯಂತ್ರಕವು 2 ಮತ್ತು 3ನೇ ಹಂತದ ಪ್ರಯೋಗಕ್ಕೆ ಅನುಮತಿ ನೀಡಿದೆ ರಾಷ್ಟ್ರೀಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ವಿಕೆ ಪೌಲ್ ಅವರು ತಿಳಿಸಿದ್ದಾರೆ. * ಪ್ರಸ್ತುತ ಕೇಂದ್ರ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ ಇಲ್ಲಿಯವರೆಗೆ ಕೋವಿಡ್-19 ಲಸಿಕೆಯನ್ನು ಒಟ್ಟು 21,85,46,667 ಜನರಿಗೆ ನೀಡಲಾಗಿದೆ ಎಂದು ವಿವರಣೆಯನ್ನು ನೀಡಿದ್ದಾರೆ.