Job Description: * ಪ್ರಸ್ತುತ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಅಡಿಯಲ್ಲಿ ಮಿಶ್ರ ಬೆಳೆ ಪದ್ಧತಿಯನ್ನು ಪ್ರೋತ್ಸಾಹಿಸಿ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಲಾಗಿದೆ, ಪ್ರಸ್ತುತ ಈ ಯೋಜನೆಗೆ ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯನ್ನು "ಪ್ರಾಯೋಗಿಕ ಜಿಲ್ಲೆ"ಯಾಗಿ ಆಯ್ಕೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ತಿಳಿಸಿದ್ದಾರೆ. * ಪ್ರಸ್ತುತ ರಾಜ್ಯದಲ್ಲಿನ ರೈತರು ಏಕ ಬೆಳೆ ಬೆಳೆಯುವ ಪದ್ಧತಿಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ, ಈ ನಷ್ಟವನ್ನು ತಪ್ಪಿಸಲು ಮತ್ತು ಆದಾಯವನ್ನು ಹೆಚ್ಚಿಸಲು ಈ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ, ಪ್ರಸ್ತುತ ಹಾವೇರಿ ಜಿಲ್ಲೆಯಲ್ಲಿ 6 ಸಾವಿರ ಹೆಕ್ಟೇರ್ನಲ್ಲಿ ಮಿಶ್ರ ಬೆಳೆಗೆ ಪ್ರೋತ್ಸಾಹವನ್ನು ನೀಡಲಾಗುತ್ತದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ. * ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ರೈತರಿಗೆ ಬಿತ್ತನೆ ಮಾಡಲು 401 ಕ್ವಿಂಟಲ್ ತೊಗರಿ, 240 ಕ್ವಿಂಟಲ್ ಶೇಂಗಾ, 2,800 ಕ್ವಿಂಟಲ್ ಸೋಯಾ ಅವರೆ ಬಿತ್ತನೆ ಬೀಜ, ಒಟ್ಟಾರೆ 2,441 ಕ್ವಿಂಟಲ್ ಬಿತ್ತನೆ ಬೀಜಗಳನ್ನೂ ಉಚಿತವಾಗಿ ನೀಡಲಾಗುವದು ಎಂದು ತಿಳಿಸಿದ್ದಾರೆ.