Job Description: * ತಮಿಳುನಾಡು ಸರ್ಕಾರವು ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಜನರ ಸೇವೆ ಮಾಡುವಲ್ಲಿ ನಿರತರಾಗಿರುವ ಪೊಲೀಸ್ ಸಿಬ್ಬಂದಿಗಳಿಗೆ 5,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ. * ಈಗಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಈ ವಿಷಯದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. * ಪ್ರಸ್ತುತ ತಮಿಳುನಾಡು ರಾಜ್ಯದಲ್ಲಿ ಇಲ್ಲಿಯತನಕ 21,48,346 ಕೊವಿಡ್-19 ಪ್ರಕರಣಗಳು ದಾಖಲಾಗಿವೆ, ಇವುಗಳಲ್ಲಿ 18,34,439 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿಯನ್ನು ಬಹಿರಂಗ ಪಡಿಸಿದೆ.