Job Description: * KSRTC ಟ್ರೇಡ್ ಮಾರ್ಕ್ (ಹೆಸರು) ಬಳಕೆಗೆ ಕರ್ನಾಟಕ ರಾಜ್ಯವು ಸ್ವತಂತ್ರವಾಗಿದೆ ಎಂದು ಡಿಸಿಎಂ ಮತ್ತು ಸಾರಿಗೆ ಸಚಿವರಾಗಿರುವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ, ಜೊತೆಗೆ ಕರ್ನಾಟಕ ರಾಜ್ಯ ಈ ಹೆಸರು ಬಳಸಲು ಕೇರಳ ಸರ್ಕಾರದ ಅನುಮತಿ ಬೇಕಿಲ್ಲ ಎಂದಿದ್ದಾರೆ, ಒಂದು ವೇಳೆ ಅಗತ್ಯ ಬಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ಕರ್ನಾಟಕ ರಾಜ್ಯವು ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. * ಇತ್ತೀಚಿಗೆ ಸುದ್ದಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದಿನ ದಿನಗಳಲ್ಲಿ ಕೆಎಸ್ಆರ್ಟಿಸಿ ಎಂದು ಹೆಸರನ್ನು ಬಳಸಲು ಅನುಮತಿ ಇಲ್ಲವೆಂದು ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದೆ ಎಂದು ಸುದ್ದಿಯಾಗಿತ್ತು. * ಪ್ರಸ್ತುತ ಮಾಧ್ಯಮಗಳು ವರದಿ ಮಾಡಿರುವ ಈ ವಿಷಯವನ್ನು ಕೂಲಂಕುಶವಾಗಿ ಪರಿಶೀಲನೇ ಮಾಡಿದ್ದಾರೆ, ಇದು ವಾಸ್ತವಕ್ಕೆ ದೂರವಾಗಿರುವ ವಿಷಯವಾಗಿದೆ ಎಂದು ದೃಢಪಟ್ಟಿದೆ, ಪ್ರಸ್ತುತ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು KSRTC ಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುಧ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಹೊರಡಿಸಲಾಗಿಲ್ಲ ಎಂದು ತಿಳಿದು ಬಂದಿದೆ ಎಂದು ರಾಜ್ಯ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ. * ಪ್ರಸ್ತುತ ಕರ್ನಾಟಕದಲ್ಲಿ ಕೆಎಸ್ಆರ್ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಕ್ರಿಯೆಯು ಜಾರಿಯಲ್ಲಿದೆ ಮತ್ತು ಕೆಎಸ್ಆರ್ಟಿಸಿಯು ತನಗೆ ನೀಡಲಾಗಿರುವ ಟ್ರೇಡ್ಮಾರ್ಕ್ಗಳನ್ನು ಬಳಸಲಾಗುವುದಿಲ್ಲ ಎಂಬ ವರದಿಗಳುನ್ನು ಕಾನೂನಾತ್ಮಕವಾಗಿ ಒಪ್ಪಲಾಗುವದಿಲ್ಲ ಎಂದು ತಿಳಿಸಿದ್ದಾರೆ, ಒಂದು ಪಕ್ಷ ಈ ತರಹದ ತೀರ್ಪಿನ ನೋಟಿಸ್ ನೀಡಿದರೆ ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡುತ್ತೇವೆ ರಾಜ್ಯ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.