Job Description: * ಉತ್ತರ ಪ್ರದೇಶದ ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿಯಾಗಿರುವ ಅನೂಪ್ ಚಂದ್ರ ಪಾಂಡೆ ಅವರನ್ನು ಚುನಾವಣಾ ಆಯೋಗದ ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. * ಪ್ರಸ್ತುತ ಈಗಿನ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಸುನಿಲ್ ಅರೋರಾ ಅವರು ಏಪ್ರಿಲ್ 12ರಂದು ನಿವೃತ್ತರಾಗಿದ್ದಾರೆ ಈ ಸ್ಥಾನಕ್ಕೆ ಇದೀಗ ಉತ್ತರ ಪ್ರದೇಶ ಕೇಡರ್ನ ನಿವೃತ್ತ ಐಎಎಸ್ ಅಧಿಕಾರಿಯಾದ ಅನೂಪ್ ಚಂದ್ ಪಾಂಡೆ ಅವರನ್ನು ನೇಮಕ ಮಾಡಿದ್ದಾರೆ. * ಪ್ರಸ್ತುತ ಚುನಾವಣೆ ಆಯೋಗದ ಮೂರು ಸದಸ್ಯರಲ್ಲಿ ಕೇವಲ ಇಬ್ಬರು ಸುಶೀಲ್ ಚಂದ್ರ ಮತ್ತು ರಾಜೀವ್ ಕುಮಾರ್ ಅವರು ಕಾರ್ಯವನ್ನು ನಿರ್ವಹಿಸುತ್ತಿದ್ದರು, ಇದೀಗ ಆ ಇನ್ನೊಂದು ಆಯುಕ್ತರ ಸ್ಥಾನಕ್ಕೆ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರನ್ನು ನೇಮಿಸಿದ್ದಾರೆ. * ಅನೂಪ್ ಚಂದ್ರ ಪಾಂಡೆ ಅವರು ಉತ್ತರ ಪ್ರದೇಶ ಕೇಡರ್ನ 1984ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದರು ಇವರು ಈ ಮೊದಲು ಭಾರತೀಯ ರಕ್ಷಣಾ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಮತ್ತು ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ, ಮತ್ತೆ ಇವರು ಉತ್ತರ ಪ್ರದೇಶ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ 2019ರ ಆಗಸ್ಟ್ನಲ್ಲಿ ನಿವೃತ್ತರಾಗಿದ್ದರು.