Job Description: * ದಲಿತ ಕವಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿದ್ದ ಡಾ. ಸಿದ್ದಲಿಂಗಯ್ಯ ಅವರು ತಮ್ಮ 66ನೇ ವಯಸ್ಸಿನಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿದ್ದಾರೆ. * ಡಾ. ಸಿದ್ದಲಿಂಗಯ್ಯ ಅವರು ದಲಿತರ ಧ್ವನಿಯಾಗಿದ್ದರು, ದಲಿತರ ಬಂಡಾಯಗಳ ಚಳುವಳಿಯಲ್ಲಿ ಸಕ್ರಿಯರಾಗಿ ಭಾಗಿಯಾಗುತ್ತಿದ್ದರು, ಹಾಗೂ ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿದ್ದಾರೆ, ಇದರ ಜೊತೆಗೆ ಸಾಮಾಜಿಕ ಸಮಾನತೆಯ ಕವನ, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಹೀಗೆ ಹಲವಾರು ಸಾಹಿತ್ಯ ರಚಿಸಿ ಹೆಸರುವಾಸಿಯಾಗಿದ್ದರು. * ಡಾ. ಸಿದ್ದಲಿಂಗಯ್ಯ ಅವರು 1954 ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕು ಮಂಚನಬೆಲೆ ಎಂಬ ಗ್ರಾಮದಲ್ಲಿ ಜನಿಸಿದ್ದರು, ಇವರು 2 ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. * ಡಾ. ಸಿದ್ದಲಿಂಗಯ್ಯ ಅವರು ರಚಿಸಿದ ಅನೇಕ ಕೃತಿಗಳು: ಏಕಲವ್ಯ, ನೆಲಸಮ, ಪಂಚಮ, ಸದನದಲ್ಲಿ ಸಿದ್ದಲಿಂಗಯ್ಯ ಭಾಗ-1 ಮತ್ತು ಭಾಗ-2, ಆತ್ಮಕಥೆಯಾದ ಊರುಕೇರಿ- ಭಾಗ-1 ಮತ್ತು ಭಾಗ-2 ಹೀಗೆ ಹಲವು ಕೃತಿಗಳನ್ನು ರಚಿಸಿದ್ದಾರೆ. * ಡಾ. ಸಿದ್ದಲಿಂಗಯ್ಯ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಪಂಪ ಪ್ರಶಸ್ತಿಗಳು ಲಭಿಸಿವೆ, ಇವರು 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು, ಈ ಸಮ್ಮೇಳನವು ಶ್ರವಣಬೆಳಗೊಳದಲ್ಲಿ ನಡೆದಿದೆ.