Job Description: * "ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್" ಯೋಜನೆಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. * ಪ್ರಸ್ತುತ ಈ "ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್" ಯೋಜನೆಯನ್ನು ಪಶ್ಚಿಮ ಬಂಗಾಳ, ಛತ್ತೀಸ್ ಗಢ ಹಾಗೂ ಅಸ್ಸಾಂ ರಾಜ್ಯಗಳು ಈ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ತಿಳಿದು ಬಂದಿದೆ. * ಬೇರೆ ಬೇರೆ ರಾಜ್ಯಗಳಲ್ಲಿನ ವಲಸೆ ಕಾರ್ಮಿಕರು ಅವರ ಕೆಲಸದ ಸ್ಥಳದಲ್ಲಿ ಪಡಿತರ ಚೀಟಿಗಳನ್ನು ನೋಂದಾಯಿಸಬಹುದು ಮತ್ತು ಅದೇ ಸ್ಥಳದಲ್ಲಿ ಪಡಿತರವನ್ನು ಪಡೆಯಲು ಈ ಯೋಜನೆಯು ಅನುಮತಿಯನ್ನು ನೀಡುತ್ತದೆ. * ವಲಸೆ ಕಾರ್ಮಿಕರಿಗೆ ಆಹಾರ ವಿತರಣೆಯ ವಿಷಯದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಎಂ.ಆರ್.ಶಾ ಅವರ ಪೀಠವು ವಿಚಾರಣೆಯನ್ನು ನಡೆಸಿತ್ತು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಯಾವುದೇ ಕಾರಣವನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು "ಒನ್ ನೇಷನ್ ಒನ್ ರೇಷನ್" ಯೋಜನೆಯನ್ನು ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.