Job Description: * ಪ್ರಸ್ತುತ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಕ್ಷಣಾ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆ ಹಾಗೂ ಆವಿಷ್ಕಾರಗಳನ್ನು ಕೈಗೊಳ್ಳುವ ಸಲುವಾಗಿ ಸುಮಾರು 499 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಿದ್ದಾರೆ. * ಪ್ರಸ್ತುತ ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಸರಿ ಸುಮಾರು 300 ಹೊಸ ಉದ್ಯಮಗಳಿಗೆ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (MSME) ಜೊತೆಗೆ ಆವಿಷ್ಕಾರಗಳನ್ನು ಕೈಗೊಳ್ಳುವ ವ್ಯಕ್ತಿಗಳಿಗೆ ಈ ಅನುದಾನವನ್ನು ಮುಂಬರುವ 5 ವರ್ಷಗಳ ಅವಧಿಗೆ ಈ ಅನುದಾನ ನೀಡುವದಾಗಿ ತಿಳಿಸಿದ್ದಾರೆ. * ಪ್ರಸ್ತುತ ಭಾರತವು ರಕ್ಷಣಾ ಶಸ್ತ್ರಾಸ್ತ್ರ ಸಾಮಗ್ರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುತ್ತಿದೆ, ಈ ಯೋಜನೆಯಿಂದ ಮಿಲಿಟರಿ ಹಾರ್ಡ್ವೇರ್ ಸಾಮಗ್ರಿಗಳ ಆಮದು ಕಡಿಮೆ ಮಾಡುಲು ಉದ್ದೇಶಿಸಲಾಗುವದು, ಇದರಿಂದಾಗಿ ರಕ್ಷಣಾ ಸಾಮಗ್ರಿಗಳ ತಯಾರಿಕೆಯಲ್ಲಿ ಭಾರತವನ್ನು ಕೇಂದ್ರ ಸ್ಥಾನವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.