Job Description: * ಟ್ವಿಟರ್ ಇದೀಗ ಭಾರತ ಸರ್ಕಾರದ ಹೊಸ ಐಟಿ ನಿಯಮಗಳನ್ನು ಅನುಸರಿಸಲು ಭಾರತದಲ್ಲಿ ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿಯನ್ನು ನೇಮಿಸಿದೆ. * 2021 ರ ಫೆಬ್ರವರಿಯಲ್ಲಿ ಭಾರತವು ಹೊಸ ಐಟಿ ನಿಯಮಗಳನ್ನು ಘೋಷಣೆ ಮಾಡಿತು, ಹಾಗೂ ಈ ನಿಯಮವನ್ನು ಮೇ. 25 ರಂದು ಜಾರಿಗೆ ತಂದಿದೆ ಆದರೆ ಈ ಹೊಸ ಐಟಿ ನಿಯಮಗಳನ್ನು ಅನುಸರಿಸಲು ವಾಟ್ಸಾಪ್ ಮತ್ತು ಫೇಸ್ಬುಕ್ ತಮ್ಮ ಕುಂದುಕೊರತೆ ಅಧಿಕಾರಿಗಳನ್ನು ನೇಮಿಸಿತು ಆದರೆ ಟ್ವಿಟರ್ ಇಂಡಿಯಾ ಹೆಚ್ಚಿನ ಸಮಯವನ್ನು ಕೇಳಿತ್ತು. * ಭಾರತೀಯ ಸರ್ಕಾರವು ಮಾಹಿತಿ ತಂತ್ರಜ್ಞಾನ ನಿಯಮಗಳನ್ನು 2021 ರ ಫೆಬ್ರವರಿಯಲ್ಲಿ ಸೂಚಿಸಿತ್ತು, ಮಾಹಿತಿ ತಂತ್ರಜ್ಞಾನ (IT) ಕಾಯ್ದೆ 2000 ರ ಸೆಕ್ಷನ್ 87 (2)ರ ಅಡಿಯಲ್ಲಿ ನಿಯಮಗಳನ್ನು ರೂಪಿಸಲಾಗಿದೆ, ಈ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳು ಸಾಮಾಜಿಕ ಮಾಧ್ಯಮ ಮತ್ತು ಓವರ್-ದಿ-ಟಾಪ್ (OTT) ಪ್ಲಾಟ್ಫಾರ್ಮ್ಗಳೊಂದಿಗೆ ವ್ಯವಹರಿಸುತ್ತವೆ. ಹೊಸ ನಿಯಮಗಳ ಪ್ರಕಾರ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಲ್ಲಿನ ವಿಷಯವನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.