Job Description: ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸರ್ಕಾರವು “ಮುಖ್ಯಮಂತ್ರಿಗೆ ಆರ್ಥಿಕ ಸಲಹಾ ಮಂಡಳಿ” ಯನ್ನು ರಚಿಸಲು ನಿರ್ಧರಿಸಿದೆ. ಈ ಸಲಹಾ ಮಂಡಳಿಯಲ್ಲಿ ವಿಶ್ವದ ಪ್ರಮುಖ ಆರ್ಥಿಕ ತಜ್ಞರನ್ನು ಸದಸ್ಯರನ್ನು ನೇಮಿಸಲಾಗುವದು. ಕೆಲ ಸದಸ್ಯರ ವಿವರಗಳು : - ಅಮೇರಿಕದ ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಂಐಟಿ) ನೊಬೆಲ್ ಪ್ರಶಸ್ತಿ ವಿಜೇತ ಎಸ್ತರ್ ಡುಫ್ಲೋ - ಭಾರತದ ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ - ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಡಾ.ಅರವಿಂದ್ ಸುಬ್ರಮಣಿಯನ್ - ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ಡ್ರೆಜ್ - ಕೇಂದ್ರದ ಮಾಜಿ ಹಣಕಾಸು ಕಾರ್ಯದರ್ಶಿ ಡಾ.ಎಸ್. ನಾರಾಯಣ್ * ಈ ಸಲಹಾ ಮಂಡಳಿಯಯ ಶಿಫಾರಸುಗಳ ಆಧಾರದ ಮೇಲೆ, ತಮಿಳುನಾಡು ಸರ್ಕಾರವು ತನ್ನ ರಾಜ್ಯದಲ್ಲಿ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಮತ್ತು ಆರ್ಥಿಕ ಬೆಳವಣಿಗೆಯ ಲಾಭಗಳು ಎಲ್ಲರಿಗೂ ತಲುಪುವಂತೆ ನೋಡಿಕೊಳ್ಳುತ್ತದೆ.