Job Description: * ಹರಿಯಾಣ ರಾಜ್ಯದ ಪ್ರಸಕ್ತ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿಯ ಪಠ್ಯಕ್ರಮದಲ್ಲಿ ಯೋಗವನ್ನು ಸೇರ್ಪಡೆ ಮಾಡಲಾಗಿದೆ' ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. * ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮ ಒಂದರಲ್ಲಿ ಪ್ರಸ್ತುತ ಯೋಗವು ಮಕ್ಕಳ ದೈನಂದಿನ ಜೀವನದ ಭಾಗವಾಗಿರಬೇಕು ಎಂಬ ನಿಟ್ಟಿನಲ್ಲಿ ಈ ನಿರ್ಧಾರವನ್ನು ತಗೆದುಕೊಳ್ಳಲಾಗಿದೆ ಎಂದಿದ್ದಾರೆ. * ಮಕ್ಕಳ ಪಠ್ಯಕ್ರಮದಲ್ಲಿ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ವಿಷಯಗಳಿಂದ ಕೂಡಿರುವ ರೀತಿಯಲ್ಲಿ ಹಾಗೂ ದೈಹಿಕ ಶಿಕ್ಷಣದ ಮಾದರಿಯಲ್ಲಿ ಯೋಗದ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲಾಗುತ್ತದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. * ಹರಿಯಾಣ ರಾಜ್ಯದ ಸುಮಾರು 1,000 ಗ್ರಾಮಗಳಲ್ಲಿ ವ್ಯಾಯಾಮ ಶಾಲೆಗಳನ್ನು ಆರಂಬಿಸಲಾಗುವದು ಎಂದು ತಿಳಿಸಿದ್ದಾರೆ, ಇಲ್ಲಿಯವರೆಗೆ ರಾಜ್ಯದ 550 ಗ್ರಾಮಗಳಲ್ಲಿ ವ್ಯಾಯಾಮ ಶಾಲೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.