Job Description: * ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಸ್ಥಿತಿಯ ನಡುವೆಯೇ ವಾರ್ಷಿಕ ಪರೀಕ್ಷೆಯನ್ನು ಆಯೋಜಿಸಲು ಸಿದ್ಧತೆಗಳ ಬಗ್ಗೆ ಆಂಧ್ರಪ್ರದೇಶ ಸರಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ, ಇದರ ಬೆನ್ನಲೇ ಪ್ರಸಕ್ತ ಶೈಕ್ಷಣಿಕ ವರ್ಷದ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲು ಆಂಧ್ರಪ್ರದೇಶ ಸರ್ಕಾರವು ತೀರ್ಮಾನ ಕೈಗೊಂಡಿದೆ ಎಂದು ತಿಳಿದು ಬಂದಿದೆ. * ಪ್ರಸ್ತುತ ಕೋವಿಡ್-19 ಸೋಂಕಿನ ಕಾರಣದಿಂದ ಎಲ್ಲ ಮಂಡಳಿಗಳು ಪರೀಕ್ಷೆ ರದ್ದುಪಡಿಸಿ ಆಂತರಿಕ ಮೌಲ್ಯಮಾಪನಕ್ಕೆ ಮುಂದಾಗಿವೆ, ಇದರ ಮಧ್ಯೆ ಆಂಧ್ರ ಸರ್ಕಾರ ಹೇಗೆ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.