Job Description: * ಭಾರತದ ಸ್ಮಾರ್ಟ್ ಸಿಟಿ ಯೋಜನೆಗಳ 6 ನೇ ವಾರ್ಷಿಕೋತ್ಸವದ ಅಂಗವಾಗಿ ಅಂತರ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ 2 ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಪುರಸ್ಕಾರ ಲಭಿಸಿದೆ. * ಸ್ಮಾರ್ಟ್ ಸಿಟಿ ಯೋಜನೆಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ತುಮಕೂರು ನಗರದ ಸ್ಮಾರ್ಟ್ ಸಿಟಿಯ ಡಿಜಿಟಲ್ ಗ್ರಂಥಾಲಯ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3 ನೇ ಸ್ಥಾನವನ್ನು ಪಡೆದಿದೆ, ಈ ಸ್ಮಾರ್ಟ್ ಸಿಟಿ ರಾಜ್ಯ ಮಟ್ಟದ ಸ್ಪರ್ಧೆಯನ್ನು ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಆಯೋಜಿಸಿತ್ತು. * ಬೆಂಗಳೂರು ಸ್ಮಾರ್ಟ್ ಸಿಟಿಗೆ ಕೋವಿಡ್-19 ತುರ್ತು ಪರಿಸ್ಥಿತಿಯ ನಿರ್ವಹಣೆ ಕಾರ್ಯಕ್ಕಾಗಿ ನೀಡುವ ಪುರಸ್ಕಾರ ಲಭಿಸಿದೆ ಇದರ ಜೊತೆಗೆ ಇಂಟರ್ನ್ ಶಿಪ್ ನೀಡುವ ಕಾಮಗಾರಿ ಯೋಜನೆಗೆ ಪದವೀಧರರಿಗೆ ಕೆಲಸ ನೀಡಿದ್ದಕ್ಕಾಗಿ ಬೆಂಗಳೂರು ಸ್ಮಾರ್ಟ್ ಸಿಟಿಯನ್ನು ರನ್ನರ್ ಅಪ್ ಎಂದು ಘೋಷಣೆ ಮಾಡಲಾಗಿದೆ. * ಬೆಂಗಳೂರು ಹಾಗೂ ತುಮಕೂರು ನಗರದ ಈ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ನೀಡಲಾಗಿರುವ ಪುರಸ್ಕಾರಗಳನ್ನು ಗಮನಿಸಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಈ ಸ್ಮಾರ್ಟ್ ಸಿಟಿ ಸಿಬ್ಬಂದಿ ವರ್ಗಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.