Job Description: *ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರ 100 ನೇ ಜನ್ಮ ದಿನಾಚರಣೆಯ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ ಅವರು, 'ಭಾರತವು ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರ ಕೊಡುಗೆಯನ್ನು ಸದಾ ಸ್ಮರಿಸಲಿದೆ. ಪಿ.ವಿ ನರಸಿಂಹರಾವ್ ಅವರು ಅಪಾರ ಜ್ಞಾನ ಮತ್ತು ಬುದ್ಧಿಶಕ್ತಿಯನ್ನು ಹೊಂದಿದ್ದರು' ಎಂದು ಟ್ವೀಟ್ ಮಾಡಿದ್ದಾರೆ. *ಪಿ.ವಿ ನರಸಿಂಹರಾವ್ ಅವರು ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದರು. 1991-1996 ರ ವರೆಗೆ ಭಾರತ ದೇಶದ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. *ಭಾರತ ದೇಶದ ಆರ್ಥಿಕತೆಯನ್ನು ಉದಾರೀಕರಣಗೊಳಿಸಿದ ಕೀರ್ತಿಗೆ ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪಾತ್ರರಾಗಿದ್ದಾರೆ.