Job Description: * ಒಡಿಶಾ ರಾಜ್ಯದ ಬಾಲಸೊರ್'ನ ಕರಾವಳಿಯ ಸೇನಾ ನೆಲೆಯಲ್ಲಿ ಅತ್ಯಾಧುನಿಕ ರೂಪಾಂತರಿ ಕ್ಷಿಪಣಿಯಾಗಿರುವ "ಅಗ್ನಿ ಪ್ರೈಮ್" ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆಸಿದ್ದಾರೆ. * ಈ "ಅಗ್ನಿ ಪ್ರೈಮ್" ಕ್ಷಿಪಣಿಯು 2 ಸಾವಿರ ಕಿ.ಮೀ ದೂರ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ, ಇದೀಗ ಒಡಿಶಾ ಕರಾವಳಿ ತೀರದಲ್ಲಿರುವ ಅಬ್ದುಲ್ ಕಲಾಂ ದ್ವೀಪದ ಸಂಚಾರಿ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ ಎಂದು DRDO ಮಾಹಿತಿ ನೀಡಿದೆ. * ಈ "ಅಗ್ನಿ ಪ್ರೈಮ್" ಕ್ಷಿಪಣಿಯನ್ನು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿಪಡಿಸಿದೆ.