Job Description: * ಪ್ರಸ್ತುತ ಉತ್ತರಾಖಂಡ ರಾಜ್ಯದ 11 ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು, ಇತ್ತೀಚಿಗೆ ಇವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ತದನಂತರ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. * ಪುಷ್ಕರ್ ಸಿಂಗ್ ಧಮಿ ಅವರು ಉತ್ತರಾಖಂಡ ರಾಜ್ಯದ ಕಿರಿಯ ವಯಸ್ಸಿನ ಮುಖ್ಯಮಂತ್ರಿಯಾಗಿದ್ದಾರೆ, ಹಾಗೂ ಇವರು ಉತ್ತರಾಖಂಡ ರಾಜ್ಯದ ಕಾಟಿಮಾ ಎಂಬ ಮತ ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದರು ಆದರೆ ಸಚಿವ ಸ್ಥಾನ ಲಭಿಸಿರಲಿಲ್ಲ, ಇದೀಗ ಇವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. * 2002 ಮತ್ತು 2008 ರಲ್ಲಿ ಪುಷ್ಕರ್ ಸಿಂಗ್ ಧಮಿ ಅವರು ಉತ್ತರಾಖಂಡ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.