Job Description: * ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಪ್ರಸ್ತುತ ವರ್ಷ 2021 ರ ನವೆಂಬರ್'ನಲ್ಲಿ ಗೋವಾ ರಾಜ್ಯದಲ್ಲಿ ನಡೆಯಲಿರುವ 52 ನೇಯ ಅಂತರಾಷ್ಟ್ರೀಯ ಚಲನಚಿತ್ರ ಮಹೋತ್ಸವದ ಪೋಸ್ಟರ್' ಹಾಗೂ ಚಲನಚಿತ್ರೋತ್ಸವದ ನಿಯಮಾವಳಿ ಪುಸ್ತಕವನ್ನು ದೆಹಲಿಯಲ್ಲಿ ಬಿಡುಗಡೆ ಮಾಡಿದರು. * ಪ್ರತಿ ವರ್ಷ ಗೋವಾ ರಾಜ್ಯದಲ್ಲಿ ನವೆಂಬರ್ ತಿಂಗಳಿನಲ್ಲಿ ನಡೆಯುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿಶ್ವದ 70 ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಮತ್ತು ಚಲನಚಿತ್ರ ರಂಗದ ಕಲಾವಿದರು ಭಾಗಿಯಾಗುತ್ತಿದ್ದರು. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದ ಭೀತಿಯಿಂದಾಗಿ ಈ ಬಾರಿಯ ಗೋವಾದಲ್ಲಿ ನಡೆಯುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆನ್ಲೈ ನ್ ಮೂಲಕ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.